ನವದೆಹಲಿ: ಸರ್ಕಾರ ನಿಗದಿಪಡಿಸಿದ ಬೆಲೆಗೆ ಔಷಧಗಳು ಸಿಗುವಂತೆ ಆಗಬೇಕು ಎಂಬ ಉದ್ದೇಶ ಹೊಂದಿರುವ ‘ಔಷಧಗಳ (ಬೆಲೆ ನಿಯಂತ್ರಣ) ಆದೇಶ 1995’ರ ವ್ಯಾಖ್ಯಾನವನ್ನು ಸೀಮಿತವಾಗಿ, ಸಂಕುಚಿತ ದೃಷ್ಟಿಯಿಂದ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ನ್ಯಾಯಪೀಠವು, ಸನ್ ಫಾರ್ಮಾಸ್ಯೂಟಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ಈ ಮಾತು ಹೇಳಿದೆ. ರೊಸಿಲಾಕ್ಸ್ ಔಷಧದ ವಿತರಕ ತಾನಲ್ಲ, ತಾನು ಅದರ ಡೀಲರ್ ಮಾತ್ರ ಎಂದು ಕಂಪನಿ ಹೇಳಿತ್ತು.

‘ವಿತರಕ ಹಾಗೂ ಡೀಲರ್ ಪದಗಳ ವ್ಯಾಖ್ಯಾನವು ಈ ನಿಯಮದ ಅಡಿಯಲ್ಲಿ ಸಂಪೂರ್ಣವಾಗಿ ಬೇರೆ ಬೇರೆ ಅಲ್ಲ. ಇಲ್ಲಿ ವಿತರಕರು ಸಗಟುದಾರ ಅಥವಾ ಚಿಲ್ಲರೆ ವ್ಯಾಪಾರಿಯ ಪಾತ್ರವನ್ನೂ ನಿರ್ವಹಿಸುವ ಸಾಧ್ಯತೆ ಇದೆ. ಆ ಮೂಲಕ, ಡೀಲರ್ ಎಂಬ ವ್ಯಾಖ್ಯಾನದ ಅಡಿಯಲ್ಲೂ ಬಂದಂತೆ ಆಗುತ್ತದೆ’ ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.