ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿತು. ಆರೋಪಿ ವಿರುದ್ಧ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.