ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನ್ಯಾಯಮೂರ್ತಿ ಸಹ್ರಾವತ್ ಅವರ ಅಪಮಾನಕರ ಮಾತು ಕಡತದಿಂದ ತೆಗೆಯಲು ‘ಸುಪ್ರೀಂ’ ಆದೇಶ

ಅನಗತ್ಯ, ಅಪಮಾನಕರ ಮಾತು–ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠ
Published 7 ಆಗಸ್ಟ್ 2024, 14:16 IST
Last Updated 7 ಆಗಸ್ಟ್ 2024, 14:16 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಏಕಸದಸ್ಯ ಪೀಠವೊಂದು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನ ವಿರುದ್ಧ ಆಡಿದ್ದ ಮಾತುಗಳನ್ನು ಕಲಾಪದ ಕಡತಗಳಿಂದ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ಬುಧವಾರ ಆದೇಶಿಸಿದೆ.

ಆ ಮಾತುಗಳು ‘ಅನಗತ್ಯವಾಗಿದ್ದವು’, ಅವು ‘ಅಪಮಾನಕರವಾಗಿದ್ದವು’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಹೇಳಿದೆ. ಆದರೆ, ಈ ಮಾತುಗಳನ್ನು ಆಡಿದ್ದ ನ್ಯಾಯಮೂರ್ತಿ ರಾಜಬೀರ್ ಸಹ್ರಾವತ್ ಅವರ ವಿರುದ್ಧ ಕ್ರಮ ಜರುಗಿಸಲು ಸಿಜೆಐ ನೇತೃತ್ವದ ಪೀಠವು ಮುಂದಾಗಿಲ್ಲ.

ಐವರು ಸದಸ್ಯರ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರೂ ಇದ್ದರು. ‘ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಪರಮೋಚ್ಚವಲ್ಲ; ದೇಶದಲ್ಲಿ ಸಂವಿಧಾನವೇ ಪರಮೋಚ್ಚ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೈಕೋರ್ಟ್ ನ್ಯಾಯಮೂರ್ತಿ ಆಡಿದ ಮಾತುಗಳು ತನಗೆ ನೋವು ಉಂಟುಮಾಡಿವೆ ಎಂದು ಪೀಠವು ವಿಚಾರಣೆ ಸಂದರ್ಭದಲ್ಲಿ ಹೇಳಿದೆ. ಹೈಕೋರ್ಟ್‌ನ ಆದೇಶದಲ್ಲಿ ಹಲವು ಸಂಗತಿಗಳ ಬಗ್ಗೆ ಅನಗತ್ಯವಾದ ಮಾತುಗಳನ್ನು ಉಲ್ಲೇಖಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉನ್ನತ ಹಂತದ ನ್ಯಾಯಾಲಯಗಳು ನೀಡುವ ಆದೇಶಗಳಿಂದ ನ್ಯಾಯಮೂರ್ತಿಗಳು ಬಾಧೆಗೆ ಒಳಗಾಗುವುದಿಲ್ಲ. ನ್ಯಾಯಾಂಗಕ್ಕೆ ಅಗತ್ಯವಿರುವ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಪೀಠವು ಹೇಳಿದೆ.

ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ್ದರ ಬಗ್ಗೆ ನ್ಯಾಯಮೂರ್ತಿ ಸಹ್ರಾವತ್ ಅವರು ತೀರಾ ಕಟುವಾದ ಮಾತುಗಳನ್ನು ಆಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT