ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ವಿಚಾರಣೆಗೆ ತಡೆ ವಿಸ್ತರಣೆ

Published 29 ಏಪ್ರಿಲ್ 2024, 10:40 IST
Last Updated 29 ಏಪ್ರಿಲ್ 2024, 10:40 IST
ಅಕ್ಷರ ಗಾತ್ರ

ನವದೆಹಲಿ: ಯೂಟ್ಯೂಬ್ ಸಂದರ್ಶನವೊಂದರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದ್ವೇಷದ ಹೇಳಿಕೆ ನೀಡಿದ ಆರೋಪದಡಿ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ವಿಧಿಸಿರುವ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

ಈ ಸಂಬಂಧ 6 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ದೂರುದಾರರಿಗೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ ಸೂಚಿಸಿದೆ.

‘ಮಧ್ಯಂತರ ಆದೇಶ ಮುಂದುವರಿಯಲಿದ್ದು, ಸೆಪ್ಟೆಂಬರ್ 9ರಂದು ಮರು ವಿಚಾರಣೆ ನಡೆಸಲಾಗುವುದು’ಎಂದು ಪೀಠ ಹೇಳಿದೆ.

ಇದೊಂದು ಖಾಸಗಿ ದೂರಾಗಿದ್ದು, ಪ್ರತಿಕ್ರಿಯೆ ದಾಖಲಿಸಲು ಸಮಯ ಕೇಳಲಾಗಿದೆ ಎಂದು ದೂರುದಾರರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ಇಂದಿರಾ ಜೈ ಸಿಂಗ್ ಹೇಳಿದ್ದಾರೆ.

ಅಣ್ಣಾಮಲೈ ವಿರುದ್ಧದ ವಿಚಾರಣೆಗೆ ಫೆಬ್ರುವರಿ 29ರಂದು ನ್ಯಾಯಾಲಯ ತಡೆ ನೀಡಿತ್ತು.

ಸಂದರ್ಶನದಲ್ಲಿ ದ್ವೇಷದ ಹೇಳಿಕೆ ನೀಡಲಾಗಿದೆ ಎಂಬ ವಿಡಿಯೊವನ್ನು ಪರಿಶೀಲಿಸಿದ ನ್ಯಾಯ ಪೀಠವು, ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ದ್ವೇಷ ಭಾಷಣ ಕಂಡುಬಂದಿಲ್ಲ ಎಂದು ಹೇಳಿತ್ತು.

ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಣ್ಣಾಮಲೈ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಒಬ್ಬ ವ್ಯಕ್ತಿ ಅಥವಾ ಸಮುದಾಯದ ಮೇಲೆ ಹೇಳಿಕೆಯ ಮಾನಸಿಕ ಪರಿಣಾಮವನ್ನೂ ದ್ವೇಷ ಭಾಷಣದ ಅಡಿಯಲ್ಲಿ ಪರಿಗಣಿಸಬಹುದು ಎಂದು ಹೈಕೋರ್ಟ್ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT