ನವದೆಹಲಿ: ಅಶ್ಲೀಲ ವಿಡಿಯೊಗಳನ್ನು ಬಿತ್ತರಿಸಿರುವ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ, ನಟಿಯರಾದ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ತನಿಖೆಗೆ ಸಹಕರಿಸುವಂತೆ ಆರೋಪಿಗಳಿಗೆ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನಾ ಅವರನ್ನೊಳಗೊಂಡಿರುವ ನ್ಯಾಯಪೀಠವು ನಿರ್ದೇಶನ ನೀಡಿದೆ.
‘ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದೆ ಮತ್ತು ಆರೋಪಿಗಳು ಪೊಲೀಸರ ತನಿಖೆಗೆ ಸಹಕರಿಸುತ್ತಿದ್ದಾರೆ’ ಎಂದು ಅರ್ಜಿದಾರರೊಬ್ಬರ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಆರ್. ಬಸಂತ್ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರವಾಗಿ ರಾಜ್ ಕುಂದ್ರಾ ಅವರಿಗೆ ಬಂಧನದಿಂದ ರಕ್ಷಣೆ ನೀಡಿತ್ತು.
ರಾಜ್ ಕುಂದ್ರಾ ವಿರುದ್ಧದ ಎಫ್‌ಐಆರ್‌ನಲ್ಲಿ ಶೆರ್ಲಿನ್ ಮತ್ತು ಪೂನಂ ಅವರನ್ನು ಸಹ ಆರೋಪಿಗಳಾಗಿ ಹೆಸರಿಸಲಾಗಿತ್ತು.