ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಣ ಅಕ್ರಮ ವರ್ಗಾವಣೆ: ಅಧಿಕಾರಿ ಸಾಹೊಗೆ ಸುಪ್ರೀಂ ಬಂಧನದಿಂದ ರಕ್ಷಣೆ

Published 25 ಜೂನ್ 2024, 16:18 IST
Last Updated 25 ಜೂನ್ 2024, 16:18 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಆಸ್ತಿ ಹೊಂದಿದ ಪ್ರಕರಣದಲ್ಲಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಒಡಿಶಾದ ಆಡಳಿತ ಸೇವೆ (ಒಎಎಸ್) ಅಧಿಕಾರಿ ಬಿಜಯ್‌ ಕೇತನ್‌ ಸಾಹೊ ಅವರಿಗೆ ಸುಪ್ರೀಂಕೋರ್ಟ್‌ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ. 

ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ಮತ್ತು ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಅವರ ರಜಾ ಅವಧಿಯ ಪೀಠವು ವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ಷರತ್ತು ವಿಧಿಸಿ ಸಾಹೊ ಅವರಿಗೆ ಬಂಧನದಿಂದ ರಕ್ಷಣೆ ನೀಡಿತು. 

ಈ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಸಂಸ್ಥೆಗೂ ನೋಟಿಸ್‌ ನೀಡಿದ ಪೀಠವು, ಬಳಿಕ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತು. 

ಸಾಹೊ ವಿರುದ್ಧ ಪ್ರಾಥಮಿಕ ಪ್ರಕರಣ ಇದೆ ಎಂದು ಒಡಿಶಾ ಹೈಕೋರ್ಟ್‌, ಈ ಹಿಂದೆ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT