ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಬಿ: ಅದಾನಿ ಸಮೂಹ ವಿರುದ್ಧ ತನಿಖೆ ಪೂರ್ಣಗೊಳಿಸಲು ಸಮಯ ನೀಡಿದ ಸುಪ್ರೀಂ ಕೋರ್ಟ್

Published 17 ಮೇ 2023, 12:34 IST
Last Updated 17 ಮೇ 2023, 12:34 IST
ಅಕ್ಷರ ಗಾತ್ರ

ನವದೆಹಲಿ: ಅದಾನಿ ಸಮೂಹವು ತನ್ನ ಷೇರುಗಳ ಮೌಲ್ಯವನ್ನು ಕೃತಕವಾಗಿ ಏರಿಳಿತ ಮಾಡಿತ್ತು ಎಂಬ ಆರೋಪಗಳ ಕುರಿತ ತನಿಖೆಯನ್ನು ಪೂರ್ಣಗೊಳಿಸಲು ಸೆಬಿಗೆ ಆಗಸ್ಟ್‌ 14ರ ವರೆಗೆ ಸಮಯಾವಕಾಶ ನೀಡಿ ಸುಪ್ರೀಂಕೋರ್ಟ್‌ ಬುಧವಾರ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪಾರ್ದೀವಾಲಾ ಅವರಿದ್ದ ನ್ಯಾಯಪೀಠ, ತನಿಖೆಯ ಪ್ರಗತಿ ಕುರಿತು ವರದಿ ಸಲ್ಲಿಸುವಂತೆ ಸೆಬಿಗೆ ಸೂಚಿಸಿತು.

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ನೆರವು ನೀಡುವುದಕ್ಕಾಗಿ, ಸುಪ್ರೀಂಕೋರ್ಟ್‌ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಎ.ಎಂ.ಸಪ್ರೆ ಸಮಿತಿಯು ಸಲ್ಲಿಸಿರುವ ವರದಿಯನ್ನು ಸಂಬಂಧಪಟ್ಟ ಕಕ್ಷಿದಾರರಿಗೆ ಒದಗಿಸುವಂತೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT