ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ (ಪಿಐಎಲ್) ಪ್ರತಿವಾದಿಯನ್ನಾಗಿಸಿದ್ದಕ್ಕೆ ಹಾಗೂ ಸೇವಾ ತಕರಾರಿಗೆ ಸಂಬಂಧಿಸಿದ ಅರ್ಜಿಯೊಂದನ್ನು ವಜಾಗೊಳಿಸಿದ್ದಕ್ಕಾಗಿ ಅವರ ವಿರುದ್ಧ ಆಂತರಿಕ ವಿಚಾರಣೆಗೆ ಆದೇಶಿಸುವಂತೆ ಕೋರಿದ್ದಕ್ಕಾಗಿ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.