ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರಮ ಕೈಗೊಳ್ಳದ ರಾಜ್ಯಪಾಲ: ಉತ್ತರಿಸುವಂತೆ ಸುಪ್ರೀಂ ಸೂಚನೆ

Published 22 ಏಪ್ರಿಲ್ 2024, 13:53 IST
Last Updated 22 ಏಪ್ರಿಲ್ 2024, 13:53 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಯು ಅಂಗೀಕರಿಸಿದ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ–2022 ವಿಚಾರ ಸಂಬಂಧ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾದ ಅರ್ಜಿ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯಪಾಲರ ಕಚೇರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

ಈ ಕುರಿತು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. 

ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ರಾಜ್ಯಪಾಲರೇ ಆಗಿರುತ್ತಾರೆ. ಆದರೆ, ಈ ಸ್ಥಾನವನ್ನು ಮುಖ್ಯಮಂತ್ರಿಗೆ ವರ್ಗಾಯಿಸುವ ಮಸೂದೆಯನ್ನು 2022ರ ಜೂನ್‌ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿತ್ತು.

ಈ ಪ್ರಕರಣದ ಕುರಿತು ರಾಜ್ಯಪಾಲರು ಹೇಳಿಕೆ ನೀಡಬೇಕು ಎಂಬ ತನ್ನದೇ ಆದೇಶಕ್ಕೆ ತಡೆ ಹೇರಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಸಯಾನ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT