ನವದೆಹಲಿ: ತೃತೀಯಲಿಂಗಿಗಳು, ಸಲಿಂಗಕಾಮಿಗಳು ಮತ್ತು ಲೈಂಗಿಕ ಕಾರ್ಯಕರ್ತೆಯರನ್ನು ರಕ್ತದಾನದಿಂದ ದೂರವಿಟ್ಟ ಮಾರ್ಗಸೂಚಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರ ಸರ್ಕಾರ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಮತ್ತು ರಾಷ್ಟ್ರೀಯ ರಕ್ತ ವರ್ಗಾವಣೆ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
2017ರ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಕಾರ್ಯಕರ್ತ ಷರೀಫ್ ಡಿ. ರಂಗ್ನೇಕರ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
2017ರ ಮಾರ್ಗಸೂಚಿಯು ತೃತೀಯಲಿಂಗಿಗಳು, ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರು (ಎಂಎಸ್‌ಎಂ) ಮತ್ತು ಮಹಿಳಾ ಲೈಂಗಿಕ ಕಾರ್ಯಕರ್ತೆಯರನ್ನು ರಕ್ತದಾನದಿಂದ ಹೊರಗಿಟ್ಟಿದೆ.