ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲ ತಾಣ ನಿಯಂತ್ರಣ: ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್‌

ಸುಳ್ಳು ಸುದ್ದಿ, ದ್ವೇಷಭಾಷಣ ನಿಯಂತ್ರಣ ಕೋರಿ ಸಲ್ಲಿಸಿದ ಪಿಐಎಲ್ ವಿಚಾರಣೆ
Last Updated 1 ಫೆಬ್ರುವರಿ 2021, 8:21 IST
ಅಕ್ಷರ ಗಾತ್ರ

ನವದೆಹಲಿ: ಫೇಸ್‌ಬುಕ್‌ ಮತ್ತು ಟ್ವಿಟರ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಮತ್ತು ದ್ವೇಷ ಭಾಷಣಗಳನ್ನು ಹರಡಿದ ಆರೋಪಕ್ಕೆ ಅದೇ ಜಾಲತಾಣಗಳನ್ನೇ ಹೊಣೆಗಾರರನ್ನಾಗಿ ಮಾಡುವಂತಹ ಕಾನೂನು ರೂಪಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ದ್ವೇಷ ಹರಡುವ ಮತ್ತು ನಕಲಿ ಸುದ್ದಿಗಳನ್ನು ಬಿತ್ತರಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ವಿನೀತ್ ಜಿಂದಾಲ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ ಈ ನೋಟಿಸ್ ನೀಡಿದೆ.

ಈ ನೋಟಿಸ್ ಜತೆಗೆ ಇತ್ಯರ್ಥಗೊಳ್ಳದೇ ಬಾಕಿ ಇರುವ ಮಾಧ್ಯಮಗಳು, ವಾಹಿನಿಗಳು ಮತ್ತು ಇತರೆ ಮಾಧ್ಯಮ ಜಾಲಗಳ ವಿರುದ್ಧದ ದೂರುಗಳನ್ನು ಇತ್ಯರ್ಥಗೊಳಿಸಲು ‘ಮಾಧ್ಯಮ ಟ್ರಿಬ್ಯೂನಲ್‘ ರಚಿಸಬೇಕೆಂಬ ಅರ್ಜಿಯನ್ನು ಸೇರಿಸಲಾಗಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ವಿನೀತ್ ಅವರು, ‘ತ್ವರಿತಗತಿಯಲ್ಲಿ ನಕಲಿ ಸುದ್ದಿ ಮತ್ತು ದ್ವೇಷದ ಭಾಷಣಗಳನ್ನು ಸ್ವಯಂಚಾಲಿತವಾಗಿ ತೆಗೆದುಹಾಕುವಂತಹ ವ್ಯವಸ್ಥೆ ರೂಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT