ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸಿ.ಎಂಗೆ ಸುಪ್ರೀಂ ಕೋರ್ಟ್‌ ನೋಟಿಸ್

Published 22 ಜನವರಿ 2024, 15:43 IST
Last Updated 22 ಜನವರಿ 2024, 15:43 IST
ಅಕ್ಷರ ಗಾತ್ರ

ನವದೆಹಲಿ: ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣವು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅವರ ಬೆಂಬಲಿಗ ಶಾಸಕರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಶಿಂದೆ ನೇತೃತ್ವದ ಶಿವಸೇನಾ ಪಕ್ಷವೇ ‘ನಿಜವಾದ ಶಿವಸೇನಾ’ ಎಂದು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಉದ್ಧವ್‌ ಠಾಕ್ರೆ ಬಣ ‘ಸುಪ್ರೀಂ’ ಮೆಟ್ಟಿಲೇರಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಿತು.

ಠಾಕ್ರೆ ಬಣದ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಆಭಿಷೇಕ್‌ ಸಿಂಘ್ವಿ ಅವರ ವಾದವನ್ನು ದಾಖಲಿಸಿಕೊಂಡ ಪೀಠ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಮುಖ್ಯಮಂತ್ರಿ ಹಾಗೂ ಬೆಂಬಲಿಗ ಶಾಸಕರಿಗೆ ನೋಟಿಸ್‌ ಜಾರಿಗೊಳಿಸಿತು.

ಶಿಂದೆ ಸೇರಿದಂತೆ ಅವರ ಬಣದ 16 ಶಾಸಕರನ್ನು ಅನರ್ಹಗೊಳಿಸಬೇಕು ಎಂಬ ಮನವಿಯನ್ನು ಸ್ಪೀಕರ್ ನಾರ್ವೇಕರ್ ಅವರು ತಳ್ಳಿಹಾಕಿದ್ದರು. ಅದೇ ರೀತಿ, ಠಾಕ್ರೆ ಬಣದ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಶಿಂದೆ ಬಣ ಇರಿಸಿದ್ದ ಕೋರಿಕೆಯನ್ನು ಕೂಡಾ ಅವರು ಪುರಸ್ಕರಿಸಿರಲಿಲ್ಲ. ಇದರಿಂದ ಎರಡೂ ಬಣಗಳು ಕೋರ್ಟ್‌ ಮೆಟ್ಟಿಲೇರಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT