ನವದೆಹಲಿ: ‘ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂಬಂಧ ಮಾರ್ಚ್ 2ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಅಧ್ಯಯನ ನಡೆಸುತ್ತಿದೆ. ಇದಕ್ಕೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ‘ಸರಿಯಾದ ಕ್ರಮ’ವನ್ನು ತೆಗೆದುಕೊಳ್ಳಲಾಗುವುದು’ ಎಂದು ಕೇಂದ್ರವು ಗುರುವಾರ ರಾಜಸಭೆಗೆ ತಿಳಿಸಿದೆ.

‘ಸಂವಿಧಾನದ 342(2) ವಿಧಿಗೆ ಸಂಬಂಧಿಸಿ ಸಂಸತ್ತು ಕಾನೂನು ರೂಪಿಸುವವರೆಗೂ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ಪ್ರಧಾನಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಸಮಿತಿಯು ನೇಮಕ ಮಾಡಲಿದೆ. ಆದರೆ, ಸದ್ಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲ. ಬದಲಿಗೆ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಪಕ್ಷದ ನಾಯಕ ಇದ್ದಾರೆ. ಆದ್ದರಿಂದ ಇವರೇ ಸಮಿತಿಯಲ್ಲಿ ಇರಲಿದ್ದಾರೆ’ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.