ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28 ವಾರಗಳ ಭ್ರೂಣ ತೆಗೆಸಲು ಮನವಿ: ಪರೀಕ್ಷೆಗೆ ಸುಪ್ರೀಂ ಕೋರ್ಟ್ ನಿರ್ದೇಶನ

Published 20 ಏಪ್ರಿಲ್ 2024, 0:01 IST
Last Updated 20 ಏಪ್ರಿಲ್ 2024, 0:01 IST
ಅಕ್ಷರ ಗಾತ್ರ

ನವದೆಹಲಿ: ತನ್ನ 28 ವಾರಗಳ ಭ್ರೂಣವನ್ನು ತೆಗೆಸಲು ಅನುಮತಿ ಕೋರಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಅವರ ಪೀಠವು, ಬಾಲಕಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಗರ್ಭಾವಸ್ಥೆಯ ಸಂಭವನೀಯ ಪರಿಣಾಮಗಳ ಕುರಿತು ಪರೀಕ್ಷೆ ನಡೆಸುವಂತೆ ನಿರ್ದೇಶಿಸಿದೆ. ಈ ವಿಷಯವನ್ನು ಸೋಮವಾರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿದೆ.

ಬಾಲಕಿಯ ತಾಯಿ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್‌ ಏಪ್ರಿಲ್‌ 4ರಂದು ತಿರಸ್ಕರಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎಫ್‌ಐಆರ್‌ ಕೂಡ ದಾಖಲಾಗಿದೆ.

ಸಂತ್ರಸ್ತ ಬಾಲಕಿಯನ್ನು ಇದೇ 20ರಂದು (ಶನಿವಾರ) ಸಿಯಾನ್‌ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿ, ಆಸ್ಪತ್ರೆಯ ವರದಿಯನ್ನು ಇದೇ 22ರಂದು (ಸೋಮವಾರ) ಬೆಳಿಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT