ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿ ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್‌ ಸಂತಾಪ

Last Updated 30 ಏಪ್ರಿಲ್ 2021, 7:02 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಸೋಂಕಿನಿಂದ ನಿಧನರಾದ ಮಾಜಿ ಅಟಾರ್ನಿ ಜನರಲ್ ಮತ್ತು ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸಂತಾಪ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ, ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯದ ಕಲಾಪ ಆರಂಭಕ್ಕೂ ಮುನ್ನ ಅಗಲಿದ ಖ್ಯಾತ ನ್ಯಾಯವಾದಿಗೆ ಸಂತಾಪ ಸೂಚಿಸಿದರು.

‘ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಸೋಲಿ, ಇಂದು ನಮ್ಮನ್ನು ಅಗಲಿದ್ದಾರೆ. ಇದೊಂದು ಬಹಳ ದುಃಖದ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ‘ ಎಂದು ಸಂತಾಪ ಸೂಚಕದಲ್ಲಿ ತಿಳಿಸಿದರು.

91 ವರ್ಷದ ಸೋಲಿ ಸೊರಾಬ್ಜಿ 1989–90 ಮತ್ತು 1998 ರಿಂದ 2004ರವರೆಗೆ ಭಾರತದ ಅಟಾರ್ಜನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT