ನವದೆಹಲಿ: ದೇಶದ ಹೈಕೋರ್ಟ್ಗಳಲ್ಲಿ ಏಳು ಲಕ್ಷ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆ ಬಾಕಿ ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಶಿಫಾರಸು ಮಾಡಿರುವ ಹೆಸರುಗಳ ವಿಚಾರವಾಗಿ ತ್ವರಿತಗತಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಗುರುವಾರ ಹೇಳಿದೆ.

ಅಲಹಾಬಾದ್ ಹೈಕೋರ್ಟ್ಗೆ 160 ನ್ಯಾಯಮೂರ್ತಿಗಳ ಹುದ್ದೆ ಮಂಜೂರಾಗಿದೆ. ಆದರೆ, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ 79 ಮಾತ್ರ. ಅಲ್ಲಿ ಅತ್ಯಧಿಕ ಸಂಖ್ಯೆಯ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ವಲ್ ಭೂಯಾನ್ ಅವರು ಇರುವ ವಿಭಾಗೀಯ ಪೀಠ ಹೇಳಿದೆ.

‘ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಕ್ರಿಯಾಶೀಲ ಆಗಬೇಕಿದೆ. ಕೊಲಿಜಿಯಂ ಮಾಡಿದ ಶಿಫಾರಸುಗಳ ವಿಚಾರವಾಗಿ ತ್ವರಿತಗತಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಿದೆ. ಬಾಕಿ ಇರುವ ಪ್ರಸ್ತಾವಗಳನ್ನು ಕೇಂದ್ರ ಸರ್ಕಾರವು ಬೇಗನೆ ವಿಲೇವಾರಿ ಮಾಡುತ್ತದೆ ಎಂದು ನಾವು ಆಶಿಸುತ್ತೇವೆ, ನಂಬಿದ್ದೇವೆ’ ಎಂದು ಪೀಠವು ಹೇಳಿದೆ.

ಬಾಂಬೆ ಹೈಕೋರ್ಟ್ಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಸಂಖ್ಯೆ 94. ಆದರೆ, ಅಲ್ಲಿ 66 ನ್ಯಾಯಮೂರ್ತಿಗಳು ಮಾತ್ರವೇ ಇದ್ದಾರೆ ಎಂದು ಅದು ತಿಳಿಸಿದೆ. ಕಲ್ಕತ್ತ ಹೈಕೋರ್ಟ್ನಲ್ಲಿ 44 ನ್ಯಾಯಮೂರ್ತಿಗಳು ಇದ್ದಾರೆ. ಆದರೆ ಅಲ್ಲಿಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಹುದ್ದೆ 72 ಎಂದು ಪೀಠವು ವಿವರಿಸಿದೆ.

2023ರಲ್ಲಿ ಕಳುಹಿಸಿರುವ ನಾಲ್ಕು ಶಿಫಾರಸುಗಳು ಮತ್ತು 2024ರಲ್ಲಿ ಕಳುಹಿಸಿರುವ 13 ಶಿಫಾರಸುಗಳು ಕೇಂದ್ರ ಸರ್ಕಾರದ ಬಳಿ ಬಾಕಿ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.