ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಜನರ ಮತದಾನಕ್ಕೆ ವಿಶೇಷ ಸೌಲಭ್ಯ: ಸುಪ್ರೀಂ ಕೋರ್ಟ್‌ ನಿರಾಕರಣೆ

Published 15 ಏಪ್ರಿಲ್ 2024, 13:13 IST
Last Updated 15 ಏಪ್ರಿಲ್ 2024, 13:13 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಸ್ಥಳಾಂತರಗೊಂಡಿರುವ ಸುಮಾರು 18,000 ಜನರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸೌಲಭ್ಯ ಕಲ್ಪಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಮಣಿಪುರದ ಎರಡು ಲೋಕಸಭಾ ಕ್ಷೇತ್ರಗಳಿಗೆ ಏ.19 ಮತ್ತು ಏ. 26ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.‍ಪಾರ್ದೀವಾಲಾ, ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ‘ಈ ಸಮಯದಲ್ಲಿ ಕೋರ್ಟ್‌ ಮಧ್ಯಪ್ರವೇಶ ಮಾಡುವುದರಿಂದ ರಾಜ್ಯದಲ್ಲಿ ನಡೆಯುವ ಚುನಾವಣೆಗೆ  ಅಡೆತಡೆಗಳು ಎದುರಾಗಬಹುದು. ಹೀಗಾಗಿ ಈ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟಿತು.

ಸಂಘರ್ಷದಿಂದ ನಲುಗಿ ಸುಮಾರು 18,000 ಜನರು ಮಣಿಪುರದ ಹೊರಗೆ ನೆಲೆಸಿದ್ದಾರೆ. ಅವರೆಲ್ಲರೂ ಮತ ಹಾಕಲು ಬಯಸಿದ್ದಾರೆ. ಹೀಗಾಗಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಮಣಿಪುರದಲ್ಲಿ 2023ರಿಂದ ಆರಂಭವಾಗಿರುವ ಸಂಘರ್ಷದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT