ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ರದ್ದತಿಗೆ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Last Updated 13 ಡಿಸೆಂಬರ್ 2022, 15:00 IST
ಅಕ್ಷರ ಗಾತ್ರ

ನವದೆಹಲಿ: ಮೀಸಲಾತಿಯನ್ನು ರದ್ದುಗೊಳಿಸುವಂತೆ ಕೋರಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೇವಲ ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದ್ದು, ಇದು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ಹೇಳಿದೆ.

ಅರ್ಜಿ ಸಲ್ಲಿಸಿದ ಕಾನೂನು ವಿದ್ಯಾರ್ಥಿನಿ ಶಿವಾನಿ ಪನ್ವಾರ್ ಅವರಿಗೆ ಭಾರಿ ದಂಡ ವಿಧಿಸುವ ಎಚ್ಚರಿಕೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರ ಪೀಠ ನೀಡಿತು.

ಈ ಅರ್ಜಿಯು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿದ ನ್ಯಾಯಾಲಯ, ಇದನ್ನು ಪ್ರಚಾರಕ್ಕಾಗಿ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡಬೇಕೆಂಬ ಮನವಿಯನ್ನು ನ್ಯಾಯಾಲಯವು ಪ್ರಶ್ನಿಸಿತು ಮತ್ತು ಅರ್ಜಿದಾರರ ಬೇಡಿಕೆಗೆ ಆಕ್ಷೇಪಣೆಯನ್ನು ಎತ್ತಿತು.

ಮೀಸಲಾತಿ ಸಮಾನತೆಗೆ ವಿರುದ್ಧವಾಗಿದೆ ಮತ್ತು ಜಾತಿ ವ್ಯವಸ್ಥೆಗೆ ಕಾರಣವಾಗುತ್ತದೆ ಎಂಬ ಅರ್ಜಿದಾರನ ವಾದವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

"ಕಾನೂನು ವಿದ್ಯಾರ್ಥಿಯು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಹಿಂತೆಗೆದುಕೊಳ್ಳದಿದ್ದರೆ ₹1 ಲಕ್ಷ ದಂಡ ವಿಧಿಸಬೇಕಾಗುತ್ತದೆ’ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT