ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಇಲ್ಲದೆ ₹ 2,000 ವಿನಿಮಯ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Published 1 ಜೂನ್ 2023, 14:34 IST
Last Updated 1 ಜೂನ್ 2023, 14:34 IST
ಅಕ್ಷರ ಗಾತ್ರ

ನವದೆಹಲಿ: ದಾಖಲೆ ಇಲ್ಲದೆಯೇ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿದೆ.

ಬೇಸಿಗೆ ರಜೆಯಲ್ಲಿ ಇಂತಹ ಅರ್ಜಿಗಳ ವಿಚಾರಣೆ ನಡೆಸಲಾಗದು ಎಂದು ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ.ವಿ. ವಿಶ್ವನಾಥನ್‌ ಹೇಳಿದ್ದಾರೆ.

ಮುಖ್ಯನ್ಯಾಯಮೂರ್ತಿ ನೇತೃತ್ವದ ನ್ಯಾಯಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಗುವುದು ಎಂದಿದ್ದಾರೆ.

ಅಪರಾಧಿಗಳು, ಭಯೋತ್ಪಾದಕರು ಕೂಡ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ನ್ಯಾಯಪೀಠವನ್ನು ಕೋರಿದ್ದರು.

ವಿಚಾರಣೆ ವಿಳಂಬವಾದರೆ ಕಪ್ಪು ಹಣವನ್ನು ಬ್ಯಾಂಕ್‌ ಮೂಲಕ ವಿನಿಮಯ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದಿರುವ ಅವರು ಈಗಾಗಲೇ ₹50 ಸಾವಿರ ಕೋಟಿ ವಿನಿಮಯ ಮಾಡಲಾಗಿದೆ ಎಂಬ ಪತ್ರಿಕಾ ವರದಿಯನ್ನೂ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT