ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಸಾಯಿಬಾಬಾ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

Published 11 ಮಾರ್ಚ್ 2024, 14:11 IST
Last Updated 11 ಮಾರ್ಚ್ 2024, 14:11 IST
ಅಕ್ಷರ ಗಾತ್ರ

ನವದೆಹಲಿ: ಮಾವೋವಾದಿಗಳೊಂದಿಗಿನ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್‌.ಸಾಯಿಬಾಬಾ ಅವರ ಬಿಡುಗಡೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ. 

ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶವು ‘ಮೇಲ್ನೋಟಕ್ಕೆ ಸಕಾರಣದಿಂದ ಕೂಡಿದೆ’ ಎಂದು ನ್ಯಾಯಪೀಠ ಹೇಳಿದೆ.

‘ಬಿಡುಗಡೆ ಆದೇಶವು ಅವರ ಕಷ್ಟದ ಫಲ. ಈ ಮನುಷ್ಯ ಎಷ್ಟು ವರ್ಷ ಜೈಲು ವಾಸ ಅನುಭವಿಸಿದ್ದಾರೆ?’ ಎಂದು ನ್ಯಾಯಮೂರ್ತಿ ಮೆಹ್ತಾ ಪ್ರತಿಕ್ರಿಯಿಸಿದ್ದಾರೆ.

ಮೇಲ್ಮನವಿ ಸ್ವೀಕಾರ: ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೊರ್ಟ್‌ನ ಮಾರ್ಚ್ 5ರ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸ್ವೀಕಾರ ಮಾಡಿದೆ. ಆದರೆ, ಮೇಲ್ಮನವಿಯ ವಿಚಾರಣೆಯನ್ನು ಮುಂಚಿತವಾಗಿ ಕೈಗೆತ್ತಿಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಅವರ ಮೌಖಿಕ ಮನವಿಯನ್ನು ನ್ಯಾಯಪೀಠವು ತಳ್ಳಿಹಾಕಿತು.

ಪ್ರಕರಣದ ಸಂಬಂಧ ಹೈಕೋರ್ಟ್‌ನ ಎರಡು ಪ್ರತ್ಯೇಕ ಪೀಠಗಳು ಎರಡು ಪ್ರತ್ಯೇಕ ಆದೇಶ ನೀಡಿದ್ದು, ಮೊದಲ ಆದೇಶದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿತ್ತು ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT