ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) ವಿದ್ಯಾರ್ಥಿ ಘಟಕದ ನಾಯಕ ಕೆ.ಎ.ರೌಫ್ ಷರೀಫ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಪ್ರಕರಣವನ್ನು ಲಖನೌನಿಂದ ಕೇರಳದ ಎರ್ನಾಕುಲಂಗೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.