ನವದೆಹಲಿ: 1996ರಲ್ಲಿ ನಡೆದ ಮಾದಕವಸ್ತು ವಶ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ 20 ವರ್ಷಗಳ ಜೈಲು ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಗುಜರಾತ್ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

‘ಈ ಅರ್ಜಿಯನ್ನು ಪರಿಗಣಿಸಲು ನಮಗೆ ಒಲವು ಇಲ್ಲ’ ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ವಿಜಯ್ ಬಿಷ್ಣೋಯಿ ಅವರ ಪೀಠ ಹೇಳಿದೆ.

ಗುಜರಾತ್ನ ಬನಾಸಕಾಂಠಾ ಜಿಲ್ಲೆಯ ಪಾಲನ್ಪುರ ಪಟ್ಟಣದ ಸೆಷನ್ಸ್ ನ್ಯಾಯಾಲಯವು ಭಟ್ ಅವರಿಗೆ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಭಟ್ ಅವರು 1996ರಲ್ಲಿ ಬನಾಸಕಾಂಠಾ ಜಿಲ್ಲೆಯ ಎಸ್ಪಿ ಆಗಿದ್ದಾಗ ಮಾದಕವಸ್ತುಗಳ ಪ್ರಕರಣವೊಂದರಲ್ಲಿ ವಕೀಲರೊಬ್ಬರನ್ನು ಸಿಲುಕಿಸುವ ಕೃತ್ಯ ಎಸಗಿರುವುದು ಸಾಬೀತಾಗಿತ್ತು. ಅವರನ್ನು ಸಿಐಡಿಯು 2018ರ ಸೆಪ್ಟೆಂಬರ್ನಲ್ಲಿ ಬಂಧಿಸಿತ್ತು. ಅಂದಿನಿಂದ ಜೈಲಿನಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.