ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ – ಅಪರಾಧ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Published 19 ಏಪ್ರಿಲ್ 2024, 15:06 IST
Last Updated 19 ಏಪ್ರಿಲ್ 2024, 15:06 IST
ಅಕ್ಷರ ಗಾತ್ರ

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕ್ಸೊ ಅಥವಾ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಾಗದು ಎಂಬ ಮದ್ರಾಸ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. 

ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಜೆ.ಬಿ. ಪಾರ್ದಿವಾಲ ಅವರಿದ್ದ ಪೀಠವು, ‘ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಾಗದೆ ಇರಬಹುದು. ಆದರೆ, ಈ ಕೃತ್ಯಕ್ಕೆ ಮಗುವಿನ ಬಳಕೆಯು ಅಪರಾಧವಾಗಲಿದೆ’ ಎಂದು ಪ್ರತಿಪಾದಿಸಿದೆ. 

ಮಕ್ಕಳು ಭಾಗಿಯಾಗಿದ್ದ ಅಶ್ಲೀಲ ವಿಡಿಯೊವೊಂದನ್ನು ತನ್ನ ಮೊಬೈಲ್‌ನಲ್ಲಿ ಇಟ್ಟುಕೊಂಡು ವೀಕ್ಷಣೆ ಮಾಡಿದ ಆರೋಪದ ಮೇರೆಗೆ 28 ವರ್ಷದ ವ್ಯಕ್ತಿಯ ವಿರುದ್ಧ ಪ್ರಾಸಿಕ್ಯೂಷನ್ ದಾಖಲಿಸಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಜನವರಿ 11ರಂದು ರದ್ದುಗೊಳಿಸಿತ್ತು. ಆದರೆ, ಹೈಕೋರ್ಟ್‌ನ ಈ ಆದೇಶವನ್ನು ರದ್ದುಗೊಳಿಸಿ, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ‘ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಅಲಯನ್ಸ್’ ಎಂಬ ಸರ್ಕಾರೇತರ ಸಂಸ್ಥೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT