ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Excise policy scam: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ, ಇ.ಡಿ ಪ್ರಕರಣಗಳಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.
Published 17 ಅಕ್ಟೋಬರ್ 2023, 12:26 IST
Last Updated 17 ಅಕ್ಟೋಬರ್ 2023, 12:26 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಗಳಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಪರವಾಗಿ ವಕೀಲ ಅಭಿಷೇಕ್ ಸಿಂಘ್ವಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌.ವಿ.ಎನ್ ಭಟ್ಟಿ ಅವರಿದ್ದ ವಿಭಾಗೀಯ ಪೀಠವು, ‌ಸಿಸೋಡಿಯಾ ಅವರ ಎರಡು ಪ್ರತ್ಯೇಕ ಜಾಮೀನು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿದೆ.

ಸಿಸೋಡಿಯಾ ಅವರನ್ನು ಫೆಬ್ರುವರಿ 26ರಂದು ಸಿಬಿಐ ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತ್ತು. ಫೆಬ್ರವರಿ 28ರಂದು ಸಿಸೋಡಿಯಾ ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿರುವ ವ್ಯಕ್ತಿ ಎಂದು ಮೇ30ರಂದು ಹೈಕೋರ್ಟ್ ಅವರಿಗೆ ಸಿಬಿಐ ಪ್ರಕರಣದಲ್ಲಿ ಜಾಮೀನು ನಿರಾಕರಿಸಿತ್ತು. ಜುಲೈ 3ರಂದು, ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಅವರ ವಿರುದ್ಧದ ಆರೋಪಗಳು ಬಹಳ ಗಂಭೀರ ಸ್ವರೂಪದ್ದಾಗಿವೆ ಎಂದು ಹೇಳಿತ್ತು.

2021ರ ನ. 17ರಂದು ದೆಹಲಿ ಸರ್ಕಾರ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಸೆ.2022ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT