ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CAA ಅರ್ಜಿ: ಕೇಂದ್ರ, ಅಸ್ಸಾಂ ಸರ್ಕಾರ ಪ್ರತಿಕ್ರಿಯೆಗೆ ಸುಪ್ರೀಂ ಕೋರ್ಟ್ ಸೂಚನೆ

Published 19 ಏಪ್ರಿಲ್ 2024, 13:35 IST
Last Updated 19 ಏಪ್ರಿಲ್ 2024, 13:35 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ–2024 (ಸಿಎಎ) ನಿಯಮಗಳನ್ನು ‍ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ.

ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಅವರಿದ್ದ ನ್ಯಾಯಪೀಠ, ಅಸ್ಸಾಂ ಸರ್ಕಾರ, ಗೃಹ ಮತ್ತು ವಿದೇಶಾಂಗ ಸಚಿವಾಲಯಗಳಿಗೆ ನೋಟಿಸ್‌ ಜಾರಿ ಮಾಡಿತು.

ಇದೇ ವಿಷಯ ಕುರಿತು ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳೊಂದಿಗೆ ಈ ಹೊಸ ಅರ್ಜಿ ಸೇರಿಸುವಂತೆಯೂ ನ್ಯಾಯಪೀಠ ಆದೇಶಿಸಿತು.

ಗುವಾಹಟಿ ನಿವಾಸಿ ಹೀರೇನ್‌ ಗೋಹೇನ್‌ ಎಂಬುವವರು ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.

‘ಸಿಎಎ ನಿಯಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ಅವು ತಾರತಮ್ಯ ಧೋರಣೆ ಮತ್ತು ಸ್ವೇಚ್ಛೆಯಿಂದ ಕೂಡಿದ್ದು, ಕಾನೂನುಬಾಹಿರ ಸಹ ಆಗಿವೆ. ಜೊತೆಗೆ, ಸಂವಿಧಾನದ ಮೂಲ ರಚನೆಗೂ ವಿರುದ್ಧವಾಗಿವೆ’ ಎಂದು ಗೋಹೇನ್‌ ಅರ್ಜಿಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT