ನವದೆಹಲಿ: ‘ಕೋವಿಡ್ 19'ಸೋಂಕು ಪತ್ತೆಗಾಗಿ ನಡೆಸುವ ‘ಆರ್‌ಟಿ–ಪಿಸಿಆರ್‘ ಪರೀಕ್ಷೆಗೆ ದೇಶದಾದ್ಯಂತ ಏಕರೂಪದ ದರ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್) ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೊಪಣ್ಣ ಮತ್ತು ವಿ.ರಾಮ ಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಈ ಕುರಿತು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ನೋಟಿಸ್ ನೀಡಿ, ವಿಚಾರಣೆಯನ್ನು ಎರಡು ವಾರಗಳ ಕಾಲ ಮಂದೂಡಿದೆ. ಏಕ ರೂಪ ದರ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಜಯ್ ಅಗರ್‌ವಾಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ₹900 ರಿಂದ ₹2800ವರೆಗೆ ದರ ನಿಗದಿಪಡಿಸಲಾಗಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ದರವಿದೆ. ಇದರ ಬದಲಿಗೆ ದೇಶಾದ್ಯಂತ ಏಕರೂಪವಾಗಿ ₹400 ದರ ನಿಗದಿಪಡಿಸಬೇಕು. ಈ ಕುರಿತು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವ ಅಗತ್ಯವಿದೆ ಎಂಬ ಅಗರ್‌ವಾಲ್ ಅವರ ಮನವಿಯ ಮೇರೆಗೆ, ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.