ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ; ಒಬಿಸಿಗೆ ಹೊಸ ಜಾತಿಗಳ ಸೇರ್ಪಡೆ: ದತ್ತಾಂಶ ಕೇಳಿದ ಸುಪ್ರೀಂ ಕೋರ್ಟ್

Published 5 ಆಗಸ್ಟ್ 2024, 16:06 IST
Last Updated 5 ಆಗಸ್ಟ್ 2024, 16:06 IST
ಅಕ್ಷರ ಗಾತ್ರ

ನವದೆಹಲಿ: ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಹೊಸದಾಗಿ ಸೇರಿಸಿರುವ ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಅವರ ಕಡಿಮೆ ಪ್ರಾತಿನಿಧ್ಯದ ಬಗ್ಗೆ ದತ್ತಾಂಶ ಒದಗಿಸುವಂತೆ ಸುಪ್ರೀಂ ಕೋರ್ಟ್, ಸೋಮವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿಕೊಂಡಿದೆ.

ಕಲ್ಕತ್ತಾ ಹೈಕೋರ್ಟ್‌ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠವು ನಡೆಸುತ್ತಿದೆ.

ಬಂಗಾಳದಲ್ಲಿ 2010ರ ಬಳಿಕ ಮುಸ್ಲಿಮರೂ ಒಳಗೊಂಡಂತೆ ಹಲವು ಸಮುದಾಯಗಳಿಗೆ ನೀಡಿದ್ದ ಒಬಿಸಿ ಸ್ಥಾನಮಾನವನ್ನು ಕಲ್ಕತ್ತ ಹೈಕೋರ್ಟ್‌ ಮೇ 22ರಂದು ರದ್ದುಗೊಳಿಸಿತ್ತು.

ಈ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಮುನ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜತೆ ಸಮಾಲೋಚನೆ ನಡೆಸಿದ್ದರೆ, ಆ ಕುರಿತ ವಿವರಗಳ ಅಫಿಡವಿಟ್‌ ಸಲ್ಲಿಸುವಂತೆಯೂ ರಾಜ್ಯ ಸರ್ಕಾರವನ್ನು ಕೇಳಿದೆ. ಒಬಿಸಿಗೆ ಸೇರಿದ 77 ಜಾತಿಗಳ ಉಪವರ್ಗೀಕರಣದ ವೇಳೆ ನಡೆಸಿದ ಸಮೀಕ್ಷೆಯ ಸ್ವರೂಪದ ಬಗ್ಗೆ ಮಾಹಿತಿ ನೀಡುವಂತೆಯೂ ಪೀಠವು ಕೇಳಿಕೊಂಡಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT