ನವದೆಹಲಿ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕೆಂಬ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿಕ್ರಿಯೆ ಕೇಳಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಪಿ. ಪಾರ್ದೀವಾಲಾ ಮತ್ತು ಮನೋಜಾ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಕೇರಳದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರ ವಕೀಲರು ‘ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ನೌಕರಿ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಕೋರಲಾಗಿದೆ’ ಪೀಠಕ್ಕೆ ಮನವಿ ಮಾಡಿದಾಗ, ಪ್ರತಿಕ್ರಿಯಿಸಿದ ಪೀಠವು, ‘ಎಲ್ಲರೂ ಸಂವಿಧಾನದ 32ನೇ ವಿಧಿಯಲ್ಲಿ ಬರುತ್ತಾರೆ. ನೀವೇಕೆ ಈ ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಬಾರದು’ ಎಂದು ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ವಕೀಲರು, ‘ಅರ್ಜಿಯಲ್ಲಿ ಎಲ್ಲಾ ರಾಜ್ಯಗಳನ್ನು ಕಕ್ಷಿದಾರರನ್ನಾಗಿ ಮಾಡಿರುವುದರಿಂದ ನಾನು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದೇನೆ’ ಎಂದು ವಕೀಲರು ಪೀಠಕ್ಕೆ ತಿಳಿಸಿದರು. ಬಳಿಕ ನ್ಯಾಯಾಲಯವು ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.