ನವದೆಹಲಿ: ಪರಿಶಿಷ್ಟ ಜಾತಿಯ ಜನರ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ 57 ಸಾವಿರ ಪ್ರಕರಣಗಳು 2023ರಲ್ಲಿ ದಾಖಲಾಗಿವೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ.

‘1989ರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. 2016 ಹಾಗೂ 2018ರಲ್ಲಿ ಮಾಡಿದ ತಿದ್ದುಪಡಿಯಲ್ಲಿ, ಸಂತ್ರಸ್ತರು ಹಾಗೂ ಸಾಕ್ಷಿಗಳ ಹಿತಾಸಕ್ತಿ ಕಾಪಾಡಲು ಮತ್ತಷ್ಟು ಕಠಿಣ ನಿಬಂಧನೆ ವಿಧಿಸಲಾಗಿದೆ’ ಎಂದು ವಿವರಿಸಿದೆ.

‘2022–23ರಲ್ಲಿ ಪರಿಶಿಷ್ಟ ಜಾತಿಯ ಜನರ ಮೇಲೆ ದೌರ್ಜನ್ಯ ನಡೆದಿರುವ ದೂರಿನಡಿ 57,789 ಪ್ರಕರಣಗಳು ದಾಖಲಾಗಿವೆ. 2021–2022ರಲ್ಲಿ 57,582 ಪ್ರಕರಣಗಳಿದ್ದರೆ, 2020– 2021ರಲ್ಲಿ 50,900 ಪ್ರಕರಣಗಳು ದಾಖಲಾಗಿರುವುದು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್ಸಿಆರ್ಬಿ) ಸಂಗ್ರಹಿಸಿದ ಅಂಕಿಅಂಶಗಳಲ್ಲಿ ಕಂಡುಬಂದಿದೆ’ ಎಂದು ಪ್ರಶ್ನೆಯೊಂದಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.