ನವದೆಹಲಿ: ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕಲ್ಪಿಸದೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಬುಧವಾರ ತಡೆ ನೀಡಿದೆ.

ಒಬಿಸಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗವು ಮಾರ್ಚ್ 31ರ ಒಳಗಾಗಿ ನಿರ್ಧಾರ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ, ಒಬಿಸಿಗಳಿಗೆ ಮೀಸಲಾತಿ ಇಲ್ಲದೆಯೇ ಚುನಾವಣೆ ನಡೆಸಿದಲ್ಲಿ ಸಮಾಜದ ಒಂದು ವರ್ಗ ಪ್ರಾತಿನಿಧ್ಯದಿಂದ ವಂಚಿತವಾಗುವುದು ಎಂದು ಅಭಿಪ್ರಾಯಪಟ್ಟಿತು.

‘ಆಡಳಿತದ ವಿಷಯದಲ್ಲಿ ನಿರ್ವಾತ ಸೃಷ್ಟಿಯಾಗಲು ಅವಕಾಶ ನೀಡಬಾರದು. ಹೀಗಾಗಿ, ಅವಧಿ ಮುಗಿದಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಹುದು. ಆದರೆ, ಆಡಳಿತಾಧಿಕಾರಿಗಳು ನೀತಿಗೆ ಸಂಬಂಧಿಸಿ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.