ನವದೆಹಲಿ: ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ (ಪಿಎಂ-ಎಬಿಎಚ್ಐಎಂ) ಜಾರಿಗೆ ತರಲು ಜ.5 ರೊಳಗೆ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಒಡಂಬಡಿಕೆಗೆ (ಎಂಒಯು) ಸಹಿ ಹಾಕುವಂತೆ ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು 2024 ಡಿಸೆಂಬರ್ 24ರಂದು ದೆಹಲಿ ಹೈಕೋರ್ಟ್ ನೀಡಿದ್ದ ನಿರ್ದೇಶನದ ವಿರುದ್ಧ ದೆಹಲಿಯ ಎಎಪಿ ಸರ್ಕಾರ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಎಂಒಯುಗೆ ಸಹಿ ಹಾಕುವಂತೆ ಎಎಪಿ ಸರ್ಕಾರಕ್ಕೆ ಬಲವಂತ ಮಾಡಿರುವ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಬೇಕೆಂದು ದೆಹಲಿ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದರು. ಇದನ್ನು ಪೀಠವು ಪುರಸ್ಕರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.