ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾಮಲೈ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‌ ತಡೆ

Published 26 ಫೆಬ್ರುವರಿ 2024, 14:07 IST
Last Updated 26 ಫೆಬ್ರುವರಿ 2024, 14:07 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಅಣ್ಣಾಮಲೈ ಅವರು 2022ರ ಅಕ್ಟೋಬರ್‌ನಲ್ಲಿ ಯೂಟ್ಯೂಬ್‌ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಪಟಾಕಿ ಸಿಡಿಸುವ ವಿಚಾರವಾಗಿ ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷದ ಮಾತು ಆಡಿದ್ದರು ಎಂಬ ಆರೋಪ ಇದೆ.

ಅಣ್ಣಾಮಲೈ ಆಡಿದ್ದ ಮಾತುಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರು ಇದ್ದ ವಿಭಾಗೀಯ ಪೀಠವು, ‘ಮೇಲ್ನೋಟಕ್ಕೆ ಇದರಲ್ಲಿ ದ್ವೇಷದ ಮಾತುಗಳು ಇಲ್ಲ’ ಎಂದು ಹೇಳಿತು. ಅಣ್ಣಾಮಲೈ ವಿರುದ್ಧ ದೂರು ಸಲ್ಲಿಸಿದ್ದ ವಿ. ಪೀಯೂಷ್ ಅವರಿಗೆ ನೋಟಿಸ್ ಜಾರಿಗೆ ಪೀಠ ಆದೇಶಿಸಿದೆ.

ಪ್ರಕರಣದಲ್ಲಿ ತಮ್ಮ ವಿರುದ್ಧ ಹೊರಡಿಸಲಾಗಿರುವ ಸಮನ್ಸ್ ಪ್ರಶ್ನಿಸಿ ಅಣ್ಣಾಮಲೈ ಅವರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಮನ್ಸ್‌ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿತ್ತು. ‘ದ್ವೇಷದ ಮಾತುಗಳ ವಿಚಾರದಲ್ಲಿ ಒಂದು ಸಮುದಾಯ ಅಥವಾ ಒಬ್ಬ ವ್ಯಕ್ತಿಯ ಮನಸ್ಸಿನ ಮೇಲೆ ಆಗುವ ಪರಿಣಾಮಗಳನ್ನೂ ಪರಿಗಣಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಹೇಳಿತ್ತು. ಮದ್ರಾಸ್ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಅಣ್ಣಾಮಲೈ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT