ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿ: ಜ. 20ರಂದು ಸುಪ್ರೀಂ ಕೋರ್ಟ್ ವಿಚಾರಣೆ

Last Updated 11 ಜನವರಿ 2023, 19:30 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಸರ್ಕಾರವು 2022ರ ಜೂನ್ 6ರಂದು ಕೈಗೊಂಡಿದ್ದ ಜಾತಿ ಸಮೀಕ್ಷೆಯ ನಿರ್ಧಾರವನ್ನು ರದ್ದುಪಡಿಸಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 20ರಂದು ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು, ಮುಂದಿನ ಶುಕ್ರವಾರ (ಜ. 20) ಅರ್ಜಿಯ ವಿಚಾರಣೆ ನಡೆಸಲು ಪಟ್ಟಿ ಮಾಡಿದೆ.

‘ಜೂನ್ 6, 2022ರಂದು ಬಿಹಾರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯು ಕಾನೂನಿನ ಮುಂದೆ ಸಮಾನತೆ ಮತ್ತು ಕಾನೂನಿನ ಸಮಾನ ರಕ್ಷಣೆಯನ್ನು ಒದಗಿಸುವ ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸಿದೆ’ ಎಂದು ಪಿಐಎಲ್‌ನಲ್ಲಿ ನಳಂದದ ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ‘ಜಾತಿಸಮೀಕ್ಷೆ ವಿರುದ್ಧ ಸಲ್ಲಿಸಲಾಗಿರುವ ಪಿಐಎಲ್‌ನ ಕ್ರಮವು ಸಂವಿಧಾನದ ಮೂಲರಚನೆಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT