ನವದೆಹಲಿ: ಪೊಲೀಸ್ ವಶದಲ್ಲಿದ್ದ ಪಾತಕಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಆಶ್ರಫ್ ಹತ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒಪ್ಪಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಜುಲೈ 3ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಎಸ್.ಆರ್. ಭಟ್ ಮತ್ತು ಅರವಿಂದ್ ಕುಮಾರ್ ಅವರು ಈ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ವಕೀಲ ವಿಶಾಲ್ ತಿವಾರಿ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ, 2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶದಲ್ಲಿ ಪೊಲೀಸರು ನಡೆಸಿರುವ 183 ಎನ್‌ಕೌಂಟರ್ ಕುರಿತೂ ತನಿಖೆ ನಡೆಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.