ನವದೆಹಲಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಎಐಎಡಿಎಂಕೆಯ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲು ಅವಕಾಶ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಜನವರಿ 12 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿತು.
2022ರ ಜುಲೈ 11ರಂದು ನಡೆದಿದ್ದ ಪಕ್ಷದ ಸಾಮಾನ್ಯ ಸಭೆಯಲ್ಲಿ ಬೈಲಾಗಳಿಗೆ ಮಾಡಿದ ತಿದ್ದುಪಡಿ, ಪಳನಿಸ್ವಾಮಿ ಆಯ್ಕೆ, ಪನೀರ್‌ಸೆಲ್ವಂ ಅವರ ಉಚ್ಚಾಟನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ.