ನವದೆಹಲಿ: ದೇಶದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಸಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.

ನ್ಯಾಯಾಲಯ ಮತ್ತು ತನಿಖಾ ಸಂಸ್ಥೆಗಳ ನಕಲಿ ಆದೇಶ ಪ್ರತಿಗಳನ್ನು ತೋರಿಸಿ ವಂಚಕರು ಹರಿಯಾಣದ ದಂಪತಿಯಿಂದ ₹1.05 ಕೋಟಿ ಸುಲಿಗೆ ಮಾಡಿರುವ ಘಟನೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಗಂಭೀರವಾಗಿ ಪರಿಗಣಿಸಿದೆ.

ವಂಚನೆಗೆ ಒಳಗಾದ 73 ವರ್ಷದ ಮಹಿಳೆಯು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದಲ್ಲಿ ಸ್ವಯಂಪ್ರೇರಿತ ದೂರು ದಾಖಲಾದ ಪ್ರಕರಣದಲ್ಲಿ ಪೀಠವು ಕೇಂದ್ರ ಸರ್ಕಾರ ಮತ್ತು ಸಿಬಿಐನ ಪ್ರತಿಕ್ರಿಯೆ ಕೋರಿದೆ.

‘ಹಿರಿಯ ನಾಗರಿಕರು ಸೇರಿದಂತೆ ಅಮಾಯಕರನ್ನು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಸಲು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನ ಆದೇಶಗಳು, ನ್ಯಾಯಾಧೀಶರ ಸಹಿಗಳನ್ನು ನಕಲಿ ಮಾಡುವುದು ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರು ಇಟ್ಟಿರುವ ನಂಬಿಕೆಯ ಮೇಲೆ ಬಲವಾದ ಹೊಡೆತ ನೀಡುತ್ತದೆ. ಇಂತಹ ಕ್ರಮವು ನ್ಯಾಯಾಂಗದ ಘನತೆಯ ಮೇಲಿನ ನೇರ ದಾಳಿಯಾಗಿದೆ’ ಎಂದು ಪೀಠ ಹೇಳಿದೆ.

‘ಇಂತಹ ಪ್ರಕರಣ ಇದೊಂದೇ ಅಲ್ಲ ಎಂಬುದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿದೆ. ದೇಶದ ವಿವಿಧ ಭಾಗಗಳಲ್ಲಿ ಹಲವು ಪ್ರಕರಣಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿವೆ. ನ್ಯಾಯಾಲಯದ ದಾಖಲೆಗಳನ್ನು ನಕಲಿ ಮಾಡುವುದು, ಹಿರಿಯ ನಾಗರಿಕರು ಸೇರಿದಂತೆ ಅಮಾಯಕರನ್ನು ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಸುಲಿಗೆ ಮಾಡುವ ಜಾಲವನ್ನು ಪೂರ್ಣ ಪ್ರಮಾಣದಲ್ಲಿ ಬಯಲಿಗೆಳೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನ ಅಗತ್ಯವೆಂದು ಭಾವಿಸುತ್ತೇವೆ’ ಎಂದಿದೆ.

ಇದಕ್ಕೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಅವರ ಸಹಾಯವನ್ನು ಕೋರಿದ ಪೀಠ, ಹಿರಿಯ ದಂಪತಿಯನ್ನು ವಂಚಿಸಿದ ಪ್ರಕರಣದಲ್ಲಿ ಇದುವರೆಗಿನ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಹರಿಯಾಣ ಸರ್ಕಾರ ಮತ್ತು ಅಂಬಾಲ ಸೈಬರ್ ಅಪರಾಧ ವಿಭಾಗಕ್ಕೆ ನಿರ್ದೇಶನ ನೀಡಿತು.

ವಂಚಕರು ಸೆಪ್ಟೆಂಬರ್ 3ರಿಂದ 16ರ ನಡುವೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಸಿದ್ದಾರೆ. ಅದಕ್ಕಾಗಿ, ನ್ಯಾಯಾಲಯದ ನಕಲಿ ದಾಖಲೆಗಳನ್ನು ತೋರಿಸಿರುವುದನ್ನು ದೂರುದಾರ ಮಹಿಳೆಯು ಪತ್ರದ ಮೂಲಕ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದರು. ವಂಚಕರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳೆಂದು ಹೇಳಿ ಆಡಿಯೊ ಮತ್ತು ವಿಡಿಯೊ ಕರೆ ಮಾಡಿ ನ್ಯಾಯಾಲಯದ ನಕಲಿ ದಾಖಲೆಗಳನ್ನು ತೋರಿಸಿದ್ದರು ಎಂದು ಪತ್ರದಲ್ಲಿ ತಿಳಿಸಿದ್ದರು.

‘ಡಿಜಿಟಲ್ ಅರೆಸ್ಟ್’ನಂತಹ ಗಂಭೀರ ಅಪರಾಧ ಪ್ರಕರಣಗಳನ್ನು ವಂಚನೆ ಅಥವಾ ಸೈಬರ್ ಅಪರಾಧದಂತಹ ಸಾಮಾನ್ಯ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ
ಸುಪ್ರೀಂ ಕೋರ್ಟ್ ಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.