ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ-ಕಾಂಗ್ರೆಸ್ ಮೈತ್ರಿ ಭಯದಿಂದ ಕೇಜ್ರಿವಾಲ್ ಬಂಧನಕ್ಕೆ ಯತ್ನ: ಭಾರದ್ವಾಜ್

Published 23 ಫೆಬ್ರುವರಿ 2024, 6:36 IST
Last Updated 23 ಫೆಬ್ರುವರಿ 2024, 6:36 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿನ ಎಎಪಿ–ಕಾಂಗ್ರೆಸ್‌ ಮೈತ್ರಿಯಿಂದ ಭಯಗೊಂಡಿರುವ ಬಿಜೆಪಿ, ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲು ಯತ್ನಿಸುತ್ತಿದೆ ಎಂದು ಸಚಿವ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಎಎಪಿ ನಡುವೆ ಸೀಟು ಹಂಚಿಕೆ ಮಾತುಕತೆಗಳು ಅಂತಿಮಗೊಳ್ಳುತ್ತಿರುವ ವರದಿಗಳು ಬರುತ್ತಿದ್ದಂತೆ ಇ.ಡಿ ಅಧಿಕಾರಿಗಳು 7ನೇ ಸಲ ಸಮನ್ಸ್‌ ಕಳುಹಿಸಿದ್ದಾರೆ.

ಕೇಜ್ರಿವಾಲ್‌ ಅವರನ್ನು ಬಂಧಿಸಲು ಸಿಬಿಐ ಕೂಡ ಯೋಜಿಸುತ್ತಿದ್ದು ಇಂದು ಸಂಜೆಯೊಳಗೆ ಸಮನ್ಸ್‌ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ನಮಗೆ ವಿಶ್ವಾಸಾರ್ಹ ಮೂಲಗಳಿಂದ ಲಭ್ಯವಾಗಿದೆ ಎಂದರು.

ಮುಂದಿನ ಎರಡು ಮೂರು ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ಆರೋಪಕ್ಕೆ ಸಿಬಿಐ ಅಥವಾ ಬಿಜೆಪಿ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. 

ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ, ರಾಜಕೀಯ ಸುನಾಮಿ ಬರಲಿದೆ, ನಿಮ್ಮ ರಾಜಕೀಯ ಲೆಕ್ಕಾಚಾರಗಳು ತಪ್ಪಾಗುತ್ತವೆ ಎಂದು ರಾಜ್ಯಸಭೆ ಸಂಸದ ಸಂದೀಪ್ ಪಾಠಕ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT