ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲಾ ಸಿಬ್ಬಂದಿ ನೇಮಕಾತಿ ಹಗರಣ: ಟಿಎಂಸಿ ಶಾಸಕ ಜೀವನ್‌ ಕೃಷ್ಣಗೆ ಇ.ಡಿ ಸಮನ್ಸ್‌

Published 4 ಆಗಸ್ಟ್ 2024, 11:09 IST
Last Updated 4 ಆಗಸ್ಟ್ 2024, 11:09 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಶಾಲಾ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ಶಾಸಕ ಜೀವನ್‌ ಕೃಷ್ಣ ಸಹಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಳೆದ ವರ್ಷ ಜೀವನ್‌ ಕೃಷ್ಣ ಅವರನ್ನು ಸಿಬಿಐ ಬಂಧಿಸಿತ್ತು. ಸೋಮವಾರ ಕೋಲ್ಕತ್ತದಲ್ಲಿರುವ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಶಾಲಾ ಸಿಬ್ಬಂದಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಜೀವನ್‌ ಕೃಷ್ಣ ಅವರಿಗೆ ಸಮನ್ಸ್‌ ನೀಡಲಾಗಿದೆ ಎಂದು ಇ.ಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಅವರ ಪತ್ನಿಯನ್ನು ಇ.ಡಿ ವಿಚಾರಣೆ ನಡೆಸಿತ್ತು. 2023ರ ಏಪ್ರಿಲ್‌ನಲ್ಲಿ ಶಾಸಕ ಜೀವನ್‌ ಕೃಷ್ಣ ಸಹಾ ಅವರನ್ನು ಸಿಬಿಐ ಬಂಧಿಸಿತ್ತು. 2024ರ ಮೇನಲ್ಲಿ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT