ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್‌ಗೆ ವಿಧಿಸಿದ್ದ ₹25 ಲಕ್ಷ ದಂಡಕ್ಕೆ ‘ಸುಪ್ರೀಂ’ ತಡೆ

ಸಿಬಿಐ, ಇಡಿ ವಿಚಾರಣೆ–ಕಲ್ಕತ್ತ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ನಿರಾಕರಣೆ
Published 26 ಮೇ 2023, 16:02 IST
Last Updated 26 ಮೇ 2023, 16:02 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರಿಗೆ ಕಲ್ಕತ್ತ ಹೈಕೋರ್ಟ್‌ ವಿಧಿಸಿರುವ ₹25 ಲಕ್ಷ ದಂಡಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಆದರೆ, ಅವರನ್ನು ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಒಳಪಡಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರಿದ್ದ ರಜಾಕಾಲದ ಪೀಠವು, ಅಭಿಷೇಕ್‌ ಬ್ಯಾನರ್ಜಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. 

‘ದಂಡ ವಿಧಿಸಿರುವುದನ್ನು ಹೊರತುಪಡಿಸಿ, ಇ.ಡಿ ಮತ್ತು ಸಿಬಿಐ ವಿಚಾರಣೆಗೆ ಕಲ್ಕತ್ತ ಹೈಕೋರ್ಟ್‌ ಆದೇಶಿಸಿರುವುದರಲ್ಲಿ  ಮೇಲ್ನೋಟಕ್ಕೆ ಯಾವುದೇ ತಪ್ಪು ಕಾಣುತ್ತಿಲ್ಲ. ಹೀಗಾಗಿ, ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ’ ಎಂದು ಪೀಠವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT