ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ (ಎಸ್ಸಿಎಸ್ಪಿ/ಟಿಎಸ್ಪಿ) ಕಾಯ್ದೆಯನ್ನು ಕೇಂದ್ರದಲ್ಲಿ ಜಾರಿಗೆ ತರುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಬುಡಕಟ್ಟು ಸಚಿವಾಲಯ ಸ್ಪಷ್ಟಪಡಿಸಿದೆ.

ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ ಕೇಳಿದ ಪ್ರಶ್ನೆಗೆ ಬುಡಕಟ್ಟು ಖಾತೆಯ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ಲಿಖಿತ ಉತ್ತರ ನೀಡಿದ್ದಾರೆ.

ಬುಡಕಟ್ಟು ಉಪಯೋಜನೆಗೆ ಸಾಕಷ್ಟು ಹಂಚಿಕೆ ಹಾಗೂ ಪರಿಣಾಮಕಾರಿ ವೆಚ್ಚವನ್ನು ಖಚಿತಪಡಿಸಿಕೊಳ್ಳಲು ಮಾಡಲು ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಉತ್ತರಾಖಂಡ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಕಾಯ್ದೆ ಜಾರಿಗೆ ತಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕ್ರಿಯಾ ಯೋಜನೆಗೆ ಕೇಂದ್ರ ಸರ್ಕಾರ 2013–14ರಲ್ಲಿ ₹24,594 ಕೋಟಿ ವೆಚ್ಚ ಮಾಡಿತ್ತು. 2025–26ನೇ ಬಜೆಟ್ನಲ್ಲಿ ₹1,27,434 ಕೋಟಿ ಹಂಚಿಕೆ ಮಾಡಲಾಗಿದೆ. ಕಳೆದ ಐದು ವರ್ಷಗಳಲ್ಲಿ ಈ ನಿಶಿ ಬಳಕೆಯು ಶೇ 92ರಷ್ಟು ಹೆಚ್ಚಳವಾಗಿದೆ. ನೀತಿ ಆಯೋಗವು ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ನಿಯಮಿತವಾಗಿ ಪರಿಶೀಲಿಸುತ್ತಿದೆ ಹಾಗೂ ಹೊಸ ಮಾರ್ಗಸೂಚಿಗಳನ್ನು ಶಿಫಾರಸು ಮಾಡುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ, ಅನುದಾನ ಹಂಚಿಕೆ ಹಾಗೂ ಬಳಕೆ ಹೆಚ್ಚಳಕ್ಕಾಗಿ ಹೊಸ ಕಾಯ್ದೆ ತರುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮಾದರಿಯಲ್ಲೇ ಕೇಂದ್ರದಲ್ಲೂ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿಗೆ ತರಬೇಕು ಎಂದು ಕರ್ನಾಟಕ ಸರ್ಕಾರವು ಇತ್ತೀಚೆಗೆ ಒತ್ತಾಯಿಸಿತ್ತು. ಈ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಸರ್ಕಾರ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.