ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಸೀಟು ಹಂಚಿಕೆ ಬಗ್ಗೆ ಅಖಿಲೇಶ್‌ ಜತೆಗೆ ಗೆಹಲೋತ್‌ ಚರ್ಚೆ: ಕಾಂಗ್ರೆಸ್‌

Published 27 ಜನವರಿ 2024, 11:10 IST
Last Updated 27 ಜನವರಿ 2024, 11:10 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಪಕ್ಷದ ಹಿರಿಯ ನಾಯಕ ಅಶೋಕ್‌ ಗೆಹಲೋತ್‌ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಉತ್ತರ ಪ್ರದೇಶದ ಪ್ರಮುಖ 11 ಸ್ಥಾನಗಳಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಯು ಉತ್ತಮ ಬೆಳವಣಿಗೆ ಎಂದು ಅಖಿಲೇಶ್‌ ಯಾದವ್‌ ಹೇಳಿದ ಬೆನ್ನಲ್ಲೇ ಕಾಂಗ್ರೆಸ್‌ ಹೀಗೆ ಹೇಳಿದೆ.

ಹಿರಿಯ ನಾಯಕ ಅಶೋಕ್‌ ಗೆಹಲೋತ್‌ ಅವರು ಅಖಿಲೇಶ್‌ ಯಾದವ್‌ ಅವರೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಮಾತುಕತೆಯು ಸಕಾರಾತ್ಮಕ ಮತ್ತು ರಚನಾತ್ಮಕವಾಗಿ ನಡೆಯುತ್ತಿದೆ. ಸೀಟುಗಳ ಹಂಚಿಕೆ ಅಂತಿಮಗೊಂಡ ನಂತರ ನಾವು ತಿಳಿಸುತ್ತೇವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮೈತ್ರಿ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಖಿಲೇಶ್‌ ಯಾದವ್‌, ರಾಜ್ಯದ 11 ಪ್ರಮುಖ ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‌ನೊಂದಿಗೆ ಸಮಾಜವಾದಿ ಪಕ್ಷದ ಮೈತ್ರಿಯು ಉತ್ತಮ ಆರಂಭವಾಗಿದೆ. ಇದರಿಂದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಹಾಯವಾಗಲಿದೆ. ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರವು ದೇಶದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT