ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ತೆಲಂಗಾಣದಲ್ಲಿ ಬಿಆರ್‌ಎಸ್‌ ಸಂಸದ ಬಿಜೆಪಿ ಸೇರ್ಪಡೆ

Published 1 ಮಾರ್ಚ್ 2024, 14:17 IST
Last Updated 1 ಮಾರ್ಚ್ 2024, 14:17 IST
ಅಕ್ಷರ ಗಾತ್ರ

ನವದೆಹಲಿ: ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್‌) ಸಂಸದ ಬಿ.ಬಿ ಪಾಟೀಲ್‌ ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಿನ್ನೆ ಬಿಆರ್‌ಎಸ್‌ನ ಮತ್ತೊಬ್ಬ ಸಂಸದ ಪೋತುಂಗತಿ ರಾಮುಲು ಬಿಜೆಪಿ ಸೇರಿದ್ದರು. ಈ ಮೂಲಕ ಬಿಆರ್‌ಎಸ್‌ನ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರಿದ್ದಾರೆ. 

ಲೋಕಸಭೆ ಚುನಾವಣೆಯ ಈ ಹೊಸ್ತಿಲಲ್ಲಿ ಬಿಆರ್‌ಎಸ್‌ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ. 

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಪಕ್ಷದ ತೆಲಂಗಾಣ ಉಸ್ತುವಾರಿ ತರುಣ್ ಚುಗ್  ಒಬಿಸಿ ಮೋರ್ಚಾ ಮುಖ್ಯಸ್ಥ ಲಕ್ಷ್ಮಣ್ ಅವರ ಸಮ್ಮುಖದಲ್ಲಿ ಬಿ.ಬಿ ಪಾಟೀಲ್‌ ಬಿಜೆಪಿ ಸೇರಿದರು.

ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷ ಅಧಿಕಾರ ಕಳೆದುಕೊಂಡ ಬಳಿಕ ಆ ಪಕ್ಷದ ಕೆಲ ನಾಯಕರು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳನ್ನು ಸೇರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT