ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೋವಿಡ್-19 ಆಸ್ಪತ್ರೆಯನ್ನು ಉದ್ಘಾಟಿಸಲು ಶನಿವಾರ ನೋಯ್ಡಾಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭೇಟಿಗೆ ಮುನ್ನ ಶನಿವಾರ ನೋಯ್ಡಾದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಜನರಿಗೆ ಡ್ರೋನ್‌ಗಳನ್ನು ಹಾರಿಸಲು ಅವಕಾಶವಿಲ್ಲ. 15 ಗೆಜೆಟೆಡ್ ಅಧಿಕಾರಿಗಳು ಮತ್ತು ಕರ್ತವ್ಯದಲ್ಲಿರುವ ಸುಮಾರು 700 ಕಾನ್‌ಸ್ಟೆಬಲ್‌ಗಳು ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ' ನೋಯ್ಡಾದ ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ರಣವಿಜಯ್ ಸಿಂಗ್ ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರ ಜಿಲ್ಲೆಯ ನೋಯ್ಡಾದ ಸೆಕ್ಟರ್ 39 ರಲ್ಲಿ ಹೊಸ ಕೋವಿಡ್-19 ಸರ್ಕಾರಿ ಆಸ್ಪತ್ರೆಯನ್ನು ಶನಿವಾರದೊಳಗೆ ಉದ್ಘಾಟಿಸಲಾಗುತ್ತಿದೆ.

ಗೌತಮ ಬುದ್ಧ ನಗರದಲ್ಲಿ ಶುಕ್ರವಾರ ಹೊಸದಾಗಿ 61 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,806ಕ್ಕೆ ಏರಿಕೆಯಾಗಿದೆ. ಈ ಪೈಕಿ 906 ಸಕ್ರಿಯ ಪ್ರಕರಣಗಳಿದ್ದರೆ, 4,857 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 43 ಜನರು ಈವರೆಗೆ ಸಾವಿಗೀಡಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು 1,08,614ಕ್ಕೆ ಏರಿಕೆಯಾಗಿದ್ದು, 43,654 ಸಕ್ರಿಯ ಪ್ರಕರಣಗಳಿದ್ದರೆ, 63,402 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 1,918 ಜನರು ಮೃತಪಟ್ಟಿರುವುದಾಗಿ ರಾಜ್ಯದ ಆರೋಗ್ಯ ಇಲಾಖೆಯು ದೃಢಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.