ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ಮೆರವಣಿಗೆ ಮೇಲೆ ಕಲ್ಲು ತೂರಾಟ: ಹಲವೆಡೆ ಸೆಕ್ಷನ್‌ 144 ಜಾರಿ

Published 9 ಜನವರಿ 2024, 14:03 IST
Last Updated 9 ಜನವರಿ 2024, 14:03 IST
ಅಕ್ಷರ ಗಾತ್ರ

ಶಾಜಾಪುರ: ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಕಾರಣ ಮಧ್ಯಪ್ರದೇಶದ ಶಾಜಾಪುರ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಸೆಕ್ಷನ್‌ 144 ಹೇರಲಾಗಿದೆ.

ಶಾಜಾಪುರದ ಮಗರಿಯಾ ಪ್ರದೇಶದಲ್ಲಿ ಸೋಮವಾರ ಸಂಜೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಗುಂಪೊಂದು ತಡೆಯೊಡ್ಡಿದೆ ಮತ್ತು  ಕಟ್ಟಡಗಳ ಮಹಡಿ ಮೇಲಿನಿಂದ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT