ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಸಂಸದರ ವಿರುದ್ಧದ ಕ್ರಮದ ಬೆನ್ನಲ್ಲೇ ರಾಜ್ಯಸಭೆಯ 45 ಸದಸ್ಯರ ಅಮಾನತು

ಸಂಸತ್ತಿನ ಭದ್ರತಾ ಲೋಪದ ವಿಚಾರವಾಗಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪ
Published 18 ಡಿಸೆಂಬರ್ 2023, 14:28 IST
Last Updated 18 ಡಿಸೆಂಬರ್ 2023, 14:28 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನ ಭದ್ರತಾ ಲೋಪದ ವಿಚಾರವಾಗಿ ಚರ್ಚೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದ್ದು ಹಾಗೂ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷಗಳ 45 ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಈ ಪೈಕಿ 34 ಸಂಸದರನ್ನು ಚಳಿಗಾಲದ ಅಧಿವೇಶನದ ಬಾಕಿ ಅವಧಿಗೆ ಮತ್ತು ಉಳಿದ 11 ಮಂದಿಯನ್ನು ಹಕ್ಕು ಬಾಧ್ಯತಾ ಸಮಿತಿ ವರದಿ ಬರುವವರೆಗೆ ಅಮಾನತು ಮಾಡಲಾಗಿದೆ. ರಾಜ್ಯಸಭೆ ನಾಯಕ ಪಿಯೂಷ್‌ ಗೋಯಲ್‌ ಅವರು ಮಂಡಿಸಿದ ಅಮಾನತು ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹಕ್ಕು ಬಾಧ್ಯತಾ ಸಮಿತಿಗೆ ಸೂಚಿಸಲಾಗಿದೆ. ಅಲ್ಲಿಯವರೆಗೂ 11 ಸಂಸದರು ಸದನದ ಕಲಾಪಗಳಿಗೆ ಹಾಜರಾಗುವಂತಿಲ್ಲ.

ಕಾಂಗ್ರೆಸ್‌ನ ಪ್ರಮೋದ್‌ ತಿವಾರಿ, ಜೈರಾಮ್‌ ರಮೇಶ್‌, ಕೆ.ಸಿ.ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಸಮಾಜವಾದಿ ಪಕ್ಷದ ರಾಮ್‌ ಗೋಪಾಲ್‌ ಯಾದವ್‌ ಅವರು ಅಮಾನತಾದ ಸಂಸದರ ಪಟ್ಟಿಯಲ್ಲಿದ್ದಾರೆ.

ಲೋಕಸಭೆಯ 33 ಸಂಸದರನ್ನು ಅಮಾನತುಗೊಳಿಸಿದ ಕೆಲವೇ ಹೊತ್ತಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಕೊನೆಗೊಳ್ಳಲಿದೆ.

ಅಮಾನತಾದ ಸಂಸದರ ಸಂಖ್ಯೆ 92ಕ್ಕೆ ಏರಿಕೆ
ಡಿಸೆಂಬರ್‌ 13ರಂದು ಸಂಸತ್ತಿನಲ್ಲಿ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರತಿಕ್ರಿಯಿಸಬೇಕು ಎಂದು ಉಭಯ ಸದನಗಳಲ್ಲಿ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.

ಈ ವಿಚಾರವಾಗಿ ಸದನದಲ್ಲಿ ಡಿಸೆಂಬರ್‌ 14ರಂದು ನಡೆದ ಕಲಾಪದ ವೇಳೆ ಪ್ರತಿಭಟಿಸಿದ್ದ ರಾಜ್ಯಸಭೆ ಮತ್ತು ಲೋಕಸಭೆಯ 14 ಸಂಸದರನ್ನು 'ಅನುಚಿತ ವರ್ತನೆ' ತೋರಿದ ಆರೋಪದಲ್ಲಿ ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ. ಅದೇ ರೀತಿ ಇಂದು, 78 ಸಂಸದರನ್ನು ಅಮಾನತು ಮಾಡಲಾಗಿದೆ.

ಇದರೊಂದಿಗೆ ಅಮಾನತುಗೊಂಡಿರುವ ಸಂಸದರ ಸಂಖ್ಯೆ 92ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT