ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದರ ಅಮಾನತು ಖಂಡಿಸಿ 'ಇಂಡಿಯಾ' ಬಣದ ಧರಣಿ: ಸಂಸತ್‌ ಭವನದ ಬಳಿ ಬಿಗಿ ಭದ್ರತೆ

Published 22 ಡಿಸೆಂಬರ್ 2023, 11:04 IST
Last Updated 22 ಡಿಸೆಂಬರ್ 2023, 11:04 IST
ಅಕ್ಷರ ಗಾತ್ರ

ನವದೆಹಲಿ: ಸಂಸದರ ಅಮಾನತು ಖಂಡಿಸಿ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್‌ ಭವನ ಹಾಗೂ ಜಂತರ್ ಮಂತರ್ ಬಳಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಜತೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 13 ರಂದು ನಡೆದ ಸಂಸತ್‌ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನದ ಕಲಾಪಕ್ಕೆ ಅಡ್ಡಿಪಡಿಸಿದ್ದವು. ಈ ಕಾರಣಕ್ಕೆ ಲೋಕಸಭೆ ಮತ್ತು ರಾಜ್ಯಸಭೆಯಿಂದ ಒಟ್ಟು 146 ಸಂಸದರನ್ನು ‌ಅಮಾನತುಗೊಳಿಸಲಾಗಿದೆ.

ಸಂಸದರ ಅಮಾನತು ಖಂಡಿಸಿ ಇಂಡಿಯಾ ಬಣದ ನಾಯಕರು ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಸರ್ಕಾರದ ಅಕ್ರಮಗಳ ವಿರುದ್ಧ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT