ನವದೆಹಲಿ: ಉತ್ತರ ಪ್ರದೇಶದಲ್ಲಿ ₹3,700 ಕೋಟಿ ಹೂಡಿಕೆ ಆಕರ್ಷಿಸುವ ಸೆಮಿಕಂಡಕ್ಟರ್ ಘಟಕ ಸ್ಥಾಪಿಸುವ ಪ್ರಸ್ತಾವವನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ.

ಇದು ಎಚ್ಸಿಎಲ್ ಮತ್ತು ಫಾಕ್ಸ್ಕಾನ್ ನಡುವಿನ ಜಂಟಿ ಉದ್ಯಮವಾಗಿರುತ್ತದೆ. ಈ ಘಟಕವು ತಿಂಗಳಿಗೆ 3.6 ಕೋಟಿ ಚಿಪ್ಗಳನ್ನು ಉತ್ಪಾದಿಸಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೇಶದಲ್ಲಿ ಈಗಾಗಲೇ ಐದು ಸೆಮಿಕಂಡಕ್ಟರ್ ಘಟಕಗಳು ನಿರ್ಮಾಣ ಹಂತದಲ್ಲಿವೆ. ಆರನೇ ಘಟಕವು ಜೆವಾರ್ ವಿಮಾನ ನಿಲ್ದಾಣದ ಬಳಿ ಸ್ಥಾಪನೆಯಾಗಲಿದೆ ಎಂದರು.

ಈ ಘಟಕವು ಮೊಬೈಲ್ ಫೋನ್, ಲ್ಯಾಪ್ಟಾಪ್ ಹಾಗೂ ಇತರ ಸಾಧನಗಳಲ್ಲಿ ಬಳಸುವ ಡಿಸ್ಪ್ಲೇಗಳಿಗೆ ಡ್ರೈವರ್ ಚಿಪ್ಗಳನ್ನು ತಯಾರಿಸಲಿದೆ. ಈ ಘಟಕವನ್ನು ತಿಂಗಳಿಗೆ 20,000 ವೇಫರ್ಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಘಟಕವು 2027ರಲ್ಲಿ ಕಾರ್ಯಾರಂಭ ಮಾಡಲಿದೆ. ಇಲ್ಲಿ 2,000 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.