ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಬಿಕ್ಕಟ್ಟು: ಎನ್‌ಡಿಎಯಿಂದ ಹೊರಬಂದ ಶಿವಸೇನೆ

Last Updated 11 ನವೆಂಬರ್ 2019, 5:11 IST
ಅಕ್ಷರ ಗಾತ್ರ

ಮುಂಬೈ:ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಬಿಜೆಪಿಯ ಮೈತ್ರಿ ಪಕ್ಷ ಶಿವಸೇನಾ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದೆ.

ಶಿವಸೇನಾ ಸಂಸದ ಹಾಗೂ ಕೇಂದ್ರದಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವಅರವಿಂದ್‌ ಸಾವಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟದಿಂದ ಹೊರ ಬಂದಿರುವುದಾಗಿ ಸೋಮವಾರ ಹೇಳಿದ್ದಾರೆ.

ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನಾಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿರುವ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.ಶಿವಸೇನಾ ಸರ್ಕಾರ ರಚನೆಗಾಗಿ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಬೆಂಬಲ ಕೋರುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT