ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಜೈಲಿನಿಂದ ಹೊರಬಂದ ಎರಡು ದಿನಗಳ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್ ಮಾಗುಂಟಾ ಅವರಿಗೆ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ’ ಎಂದು ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದೆ.

ಅಬಕಾರಿ ನೀತಿ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್ 2) ಜಾಮೀನು ಮಂಜೂರು ಮಾಡಿತ್ತು.

‘ರಾಘವ್ ಮಾಗುಂಟಾ ಅವರ ತಂದೆ, ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟಾ ಶ್ರೀನಿವಾಸುಲು ರೆಡ್ಡಿ ಅವರ ವಿರುದ್ಧ 2022ರ ಸೆಪ್ಟೆಂಬರ್ 16ರಂದು ಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಅವರನ್ನು ಒತ್ತಾಯಿಸಲಾಯಿತು. ಅವರು ನಿರಾಕರಿಸಿದಾಗ, ಅವರ ಮಗ ರಾಘವ್ ರೆಡ್ಡಿ ಅವರನ್ನು ಬಂಧಿಸಲಾಯಿತು. ನಿರಂತರ ವಿಚಾರಣೆಯ ಬಳಿಕ ರೆಡ್ಡಿ ಅವರು ಕೇಜ್ರಿವಾಲ್ ವಿರುದ್ಧ ಹೇಳಿಕೆಯನ್ನು ಬದಲಾಯಿಸಿದರು’ ಎಂದು ಸಿಂಗ್ ತಿಳಿಸಿದ್ದಾರೆ.
.ಬಿಜೆಪಿಗೆ ತಕ್ಕ ಉತ್ತರ ಕೊಡುವ ಕಾಲ: ಸಂಜಯ್ ಸಿಂಗ್.
‘ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಲು ದೊಡ್ಡ ಪಿತೂರಿಯನ್ನು ನಡೆಸಲಾಗಿದೆ. ಅಬಕಾರಿ ನೀತಿ ಹಗರಣದ ಹಿಂದೆ ಬಿಜೆಪಿ ಕೈವಾಡ ಇದ್ದು, ಪಕ್ಷದ ಹಿರಿಯ ನಾಯಕರು ಶಾಮೀಲಾಗಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಅವರು ಪ್ರಾಮಾಣಿಕ ಜೀವನವನ್ನು ನಡೆಸಿದ್ದಾರೆ. ದೆಹಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ನೀಡುವ ಗುರಿಯನ್ನು ಹೊಂದಿದ್ದರು ಎಂದು ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.