ನವದೆಹಲಿ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಹಮದ್ ಪಟೇಲ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇಲ್ಲಿನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
71 ವರ್ಷದ ಅವರಿಗೆ ವಾರದ ಹಿಂದೆ ಕೋವಿಡ್ ದೃಢಪಟ್ಟಿತ್ತು. ಭಾನುವಾರ ಪಟೇಲ್ ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದು, ‘ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯಕೀಯ ಆರೈಕೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.